ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ನಟ ಕಿಚ್ಚ ಸುದೀಪ್ ಅವರು ದಿಢೀರ್ ಭೇಟಿ ನೀಡಿದ್ದು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲು ಪ್ರಯತ್ನಗಳು ನಡೆದಿರುವುದಾಗಿ ಸುದ್ದಿ ಹರಡಿತ್ತು.
ಸುದೀಪ್ ಅವರು ಡಿಕೆಶಿ ಅವರನ್ನ ಭೇಟಿ ಮಾಡಿದ್ದೇಕೆ..?
ನಟ ಕಿಚ್ಚ ಸುದೀಪ್ ಅವರು ಡಿ ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿರುವ ಅಸಲಿ ಕಾರಣ ಏನು ಎನ್ನುವ ಪ್ರಶ್ನೆ ಉದ್ಭವಿಸಿದೆ. ಇನ್ನು ಫೆಬ್ರವರಿ 8ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲಿಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯಾವಳಿ ಆರಂಭವಾಗಲಿದೆ. ಈ ಕಾರ್ಯಕ್ರಮದ ಉದ್ಘಾಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸುದೀಪ್ ಆಹ್ವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದಿನ ರಾಜಕೀಯ ಸಂಪರ್ಕಗಳು:
ಕಳೆದ ವರ್ಷ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ಸುದೀಪ್ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದರು. ಇದರ ನಂತರ ಸುದೀಪ್ ಅವರು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, “ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ನನ್ನನ್ನು ಸೇರಿಸಿಕೊಳ್ಳಲು ಒತ್ತಡ ತಂದಿದ್ದವು” ಎಂದು ಹೇಳಿದ್ದರು. ಆದರೆ, ಇತ್ತೀಚಿನ ಈ ಭೇಟಿಯಲ್ಲಿ ರಾಜಕೀಯ ವಿಷಯಗಳು ಚರ್ಚೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಇದೀಗ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಕಿಚ್ಚ ಸುದೀಪ್ ಅವರು ಸೌಜನ್ಯ ಭೇಟಿಯಾಗಿದ್ದಾರೆ. ಈ ವೇಳೆ ಯಾವುದೇ ರಾಜಕೀಯ ವಿಷಯವನ್ನ ಚರ್ಚೆ ಮಾಡಿಲ್ಲ. ಇನ್ನು ಇದೇ ವೇಳೆ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ನಲಪಾಡ್ ಕೂಡಾ ಆಗಮಿಸಿದ್ದಾರೆ. SIT ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಹೀಗಾಗಿ SIT ನೋಟಿಸ್ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಭೇಟಿಗೆ ನಲಪಾಡ್ ಆಗಮಿಸಿದ್ದಾರೆ. ನೋಟಿಸ್ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಮಾತುಕತೆ ನಡೆಸಿರೋ ಸಾಧ್ಯತೆ ಇದೆ ಎನ್ನಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc