ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯೊಬ್ಬರ ಕಿಡ್ನ್ಯಾಪ್ ಕೇಸ್ ಸುಳಿಯಲ್ಲಿ ಸಿಲುಕಿರುವ ಭವಾನಿ ರೇವಣ್ಣಗೆ ಸುಪ್ರೀಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಿಡ್ನ್ಯಾಪ್ ಕೇಸ್ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದು ಕೋರಿ ಎಸ್ಐಟಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿತ್ತು. ಈ ಬಗ್ಗೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭೂಯಾನ್ ಅವರನ್ನೊಳಗೊಂಡ ಪೀಠವು ಎಸ್ಐಟಿ ಮೇಲ್ಮನವಿ ಮೇಲೆ ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿದ್ದಾರೆ. ಎಸ್ಐಟಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.