ಕಿಡ್ಯ್ನಾಪ್ ಪ್ರಕರಣದಲ್ಲಿ ಆರೋಪಿಯಾಗಿ ಗುರುತಿಸಿಕೊಂಡಿದ್ದ ಭವಾನಿ ರೇವಣ್ಣಗೆ ನಿಟ್ಟುಸಿರು ಬಿಡುವಂತಾಗಿದೆ. ಯಾಕೆಂದ್ರೆ ಹೈಕೋರ್ಟ್ ಏಕಸದಸ್ಯ ಪೀಠ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಕಳೆದ ಸುಮಾರು ಒಂದುವರೆ ತಿಂಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಈ ಗಳಿಗೆವರೆಗೂ ಎಸ್ಐಟಿ ಪೊಲೀಸರಿಗೆ ಸಿಕ್ಕಿಲ್ಲ. ಒಂದಷ್ಟು ಸುಳಿವು ಸಿಗದಂತೆ ಅದೆಲ್ಲಿದ್ದರೂ ಮುಂದಿನ ಪೊಲೀಸರ ತನಿಖೆಯಲ್ಲಿ ಗೊತ್ತಾಗಬೇಕಿದೆ ಅಷ್ಟೇ.
ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ. ಎರಡು ಕಾಲು ಮಂಡಿ ಚಿಪ್ಪಿನ ಶಸ್ತ್ರ ಚಿಕಿತ್ಸೆ ಆಗಿದೆ ಹೀಗಾಗಿ ಅವರು ಸದ್ಯ ಓಡಾಡುವಂತಿಲ್ಲ ಎಂದು ಅಲ್ಲಲ್ಲಿ ಸುದ್ದಿ ಹರಿದಾಡುತ್ತಿದ್ದವು. ಮುಂದೆ ಯಾವುದು ಸತ್ಯ ಯಾವುದು ಸುಳ್ಳು ಎಂಬುದು ಮುಂದಿನ ದಿನಗಳಲ್ಲಿ ಪೊಲೀಸರ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.