ಉದ್ಯೋಗ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮುಂದುವರೆದಿದ್ದು, 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ನೆರೆಯ ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಹಿಂದೂಗಳ ಹತ್ಯೆಯಾಗಿದೆ. ದೇವಸ್ಥಾನಗಳನ್ನು ಧ್ವಂಸ ಮಾಡಿ ವಿಕೃತಿ ಮೆರೆದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಒಂದು ಕೋಟಿಗೂ ಅಧಿಕ ಹಿಂದೂಗಳು ಪಶ್ಚಿಮ ಬಂಗಾಳಕ್ಕೆ ಬರುವ ನಿರೀಕ್ಷೆ ಇದೆ ಎಂದು ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಪಶ್ಚಿಮ ಬಂಗಅಳದ ವಿಧಾನಸಭೆಯ ಮುಂಗಾರು ಅಧಿವೇಶನದ ವೇಳೆ ಮಾತನಾಡಿದ ಅವರು, ನೆರೆಯ ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಹಿಂದೂಗಳ ಹತ್ಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 1 ಕೋಟಿಗೂ ಅಧಿಕ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಶೀಘ್ರ ಪ್ರವೇಶಿಸುವ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬರ ಮಾಡಿಕೊಳ್ಳಲು ಸರ್ಕಾರ ಹಾಗೂ ಜನರು ಸಿದ್ಧರಿರಬೇಕು ಎಂದು ಕರೆ ನೀಡಿದ್ದಾರೆ.
ನಿರಾಶ್ರಿರಾಗಿ ಬರುವ ಬಾಂಗ್ಲಾದ ಹಿಂದೂಗಳಿಗೆ ಸರ್ಕಾರ ಸಿಎಎ ಅಡಿ ಭಾರತದ ಪೌರತ್ವ ನೀಡಿಬೇಕು. ಈ ಸಂಬಂಧ ನಾನು ರಾಜ್ಯಪಾಲರಾದ ಆನಂದ್ ಬೋಸ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ವಿನಂತಿಸುತ್ತೇನೆ. ಧಾರ್ಮಿಕ ಹಿಂಸೆಗೆ ಗುರಿಯಾದವರಿಗೆ ನಾವು ರಕ್ಷಣೆ ನೀಡಬೇಕಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಮಾಡಲಾಗುತ್ತಿದೆ. ಕೆಲ ದಿನಗಳಲ್ಲಿ ಅಲ್ಲಿನ ಪರಿಸ್ಥಿತಿ ತಹಬದಿಗೆ ಬರದಿದ್ದರೆ, 1947 ಅಥವಾ 1971 ರ ಲಿಬರೇಶನ್ ಯುದ್ಧದ ಸಂದರ್ಭದಲ್ಲಾದಂತೆ ಬಾಂಗ್ಲಾದಿಂದ ಬರಲಿರುವ 1 ಕೋಟಿಗೂ ಅಧಿಕ ನಿರಾಶ್ರಿತರನ್ನು ಸೇರಸಿಕೊಳ್ಳಲು ಪಶ್ಚಿಮ ಬಂಗಾಳ ಸಿದ್ಧವಾಗಬೇಕಿದೆ ಎಂದು ವಿಪಕ್ಷ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.