ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ಸ್ಥಳವಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅರ್ಕಾರ ಮಹಿಳೆಯರನ್ನು ವಿಫಲಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ವಾಗ್ದಾಳಿ ನಡೆಸಿದ್ದಾರೆ.
ಸಮಾಜದಲ್ಲಿ ಮಹಿಳೆಯರಿಗೆ ಗೌರವಾನ್ವಿತ ಸ್ಥಾನಮಾನವನ್ನು ನೀಡಿದ್ದ ಬಂಗಾಳದ ಪ್ರಾಚೀನ ವೈಭವವನ್ನು ಮರಳಿ ತರಬೇಕಾಗಿದೆ. ಆದರೆ ಈಗ ರಾಜ್ಯದಲ್ಲಿ ಮಹಿಳೆಯರು ಗೂಂಡಾಗಳಿಗೆ ಹೆದರುತ್ತಿದ್ದಾರೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂವೇದನಾ ರಹಿತವಾಗಿ ವರ್ತಿಸುತ್ತಿದೆ ಎಂದು ಟೀಕಿಸಿದ್ದಾರೆ.
ಬಂಗಾಳದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದನ್ನು ಸರ್ಕಾರವೇ ಖಚಿತಪಡಿಸಿದೆ. ಕೋಲ್ಕತ್ತಾದ ಸರ್ಕಾರಿ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ವೈರ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವೇ ಇದಕ್ಕೆ ನಿದರ್ಶನ. ಆದರೆ ಇಂತಹ ಕೃತ್ಯಗಳು ಮರುಕಳಿಸಬಾರದು ಎಂದು ಹೇಳಿದ್ದಾರೆ.