ಕೊಪ್ಪಳ : “ಜೈ ಶ್ರೀರಾಮ್” ಎಂದು ಹೇಳಿದ್ದಕ್ಕೆ ಮುಸ್ಲಿಂ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶೈನ್ ಬಾರ್ನಲ್ಲಿ ಈ ಘಟನೆ ನಡೆದಿದೆ.
ಶ್ರೀರಾಮನಗರದ ಕುಮಾರ್ ರಾಠೋಡ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್ನಲ್ಲಿ ಜೈ ಶ್ರೀರಾಮ್ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.