ಬೆಂಗಳೂರು, ಜನವರಿ 5: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ವಿವಿಧ ಸಭೆಗಳನ್ನು ನಡೆಸಿದರು.
ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿ ಕುರಿತು ಸಭೆ: ಸಚಿವ ಸಂತೋಷ್ ಲಾಡ್ ಅವರು ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಾಯ ಇಲಾಖೆ ಹಾಗೂ ಗೃಹ ಮಂಡಳಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
108 ಅಂಬ್ಯುಲೆನ್ಸ್ ಸಿಬ್ಬಂದಿ ಸಮಸ್ಯೆಗಳ ಬಗ್ಗೆ ಸಭೆ
ಸಚಿವ ಲಾಡ್ ಅವರು ವಿಕಾಸಸೌಧದಲ್ಲಿ 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ,, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಕೆ.ಬಿ. ಶಿವಕುಮಾರ್, ಉಪ ನಿರ್ದೇಶಕ ಡಾ.ಪ್ರಭುದೇವ್ ಗೌಡ, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತ ಡಾ.ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತ ರಾದ ಶ್ರೀ ರವಿಕುಮಾರ್, 108 ಗುತ್ತಿಗೆದಾರರಾದ ಜಿ.ವಿ.ಕೆ ಸಂಸ್ಥೆಯ ಪ್ರಮುಖರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ಕುರಿತು ಸಭೆ
ಸಚಿವ ಸಂತೋಷ್ ಲಾಡ್ ಅವರು, ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವ ಬಗ್ಗೆ ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ ಅಪರ ಕಾರ್ಮಿಕ ಆಯುಕ್ತರಾದ ಡಾ.ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ಚಿದಾನಂದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಗೀತಾ ಮೆನನ್, ಶ್ರೀಮತಿ ವಿಜಯ ಮತ್ತಿತರರು ಪಾಲ್ಗೊಂಡಿದ್ದರು.