ಮುಂಬೈ ನ ಟ್ರಾಫಿಕ್ ಪೊಲೀಸ್ ಒಬ್ಬರು ಎಂದಿನಂತೆ ಇಂದೂ ಸಹ ಕರ್ತವ್ಯಕ್ಕೆ ಹಾಜರಾಗಿದ್ದರು. ಇಂದು ಅವರ ಮೊಬೈಲ್ಗೆ ಒಂದು ಮೆಸೇಜ್ ಬಂದಿತ್ತು. ಅದನ್ನು ನೋಡಿದ ಟ್ರಾಫಿಕ್ ಪೊಲೀಸ್ ಶಾಕ್ ಆಗಿದ್ದಾರೆ. ಏಕೆಂದರೆ ಆ ಮೆಸೇಜ್ನಲ್ಲಿತ್ತು ಒಂದು ಗಂಭೀರ ವಿಷಯ. ಆ ಮೆಸೇಜ್ನಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ನೀಡಿದ್ದರು.
ಬಾಂಬ್ ಸ್ಫೋಟದ ಮೂಲಕ ಪ್ರಧಾನಿ ಮೋದಿಯ ಹತ್ಯೆ ನಡೆಸಬಹುದು ಎಂದು ಮೆಸೇಜ್ನಲ್ಲಿ ತಿಳಿಸಿದ್ದರು. ಈ ಸಂದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹೆಸರಿಸಲಾಗಿದ್ದು, ಅವರು ಪಾಕಿಸ್ತಾನದ ಐಎಸ್ಐ ಏಜೆಂಟ್ಗಳಾಗಿದ್ದಾರೆ ಎಂದು ತಿಳಿಸಿದ್ದರು.
ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಮೆಸೇಜ್ ಕಳುಹಿಸಿದವರ ಪತ್ತೆಗೆ ಹುಡುಕಾಟ ನಡೆಯುತ್ತಿದೆ. ಇದು ಕಳೆದ 10 ದಿನಗಳಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಬಂದಿರುವ ಎರಡನೇ ಬೆದರಿಕೆ ಇದಾಗಿದೆ. ಈ ಮೊದಲು ಕೂಡ ಪ್ರಧಾನಿ ಮೋದಿಗೆ ಜೀವ ಬೆದರಿಕೆ ಇದೆ ಎಂಬ ಮೆಸೇಜ್ ಮುಂಬೈ ಪೊಲೀಸರಿಗೆ ಬಂದಿತ್ತು. ನವೆಂಬರ್ 27ರಂದು ಪೊಲೀಸರಿಗೆ ಅನಾಮಧೇಯ ಕರೆ ಬಂದಿದ್ದು, ಅದರಲ್ಲಿಯೂ ಪ್ರಧಾನಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ 34 ವರ್ಷದ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ಆಕೆಯ ಹಿನ್ನೆಲೆಯನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.