- ಇಂದಿನಿಂದ ಜೂನ್ 6ರವರೆಗೆ ಮದ್ಯ ಮಾರಾಟ ನಿಷೇಧ
- ಜೂನ್ 1 ಮತ್ತು ಜೂನ್ 3ರಂದು ಮದ್ಯ ಮಾರಾಟಕ್ಕೆ ಅವಕಾಶ
ಜೂನ್ 1 ( ಇಂದಿನಿಂದ ) ರಿಂದ 6 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಮಗೆಲ್ಲ ತಿಳಿದಿರುವ ಸುದ್ದಿ. ಜೂನ್ 1 ಮತ್ತು ಜೂನ್ 3ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
ಇಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧಿಸಲಾಗಿದೆ. ಇನ್ನು ಜೂನ್ 4 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವ ಕಾರಣ ಜೂನ್ 3ರ ಮಧ್ಯರಾತ್ರಿಯಿಂದ ಜೂನ್ 4ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ನಿಷೇಧಿಸಲಾಗಿದೆ. ಇನ್ನು ವೀಕೆಂಡ್ ಇರುವ ಕಾರಣ ಕುಡಿದು ಎಂಜಾಯ್ ಮಾಡಬೇಕೆನ್ನುವವರ ಮನಸ್ಸಿಗೆ ಬೇಸರ ಉಂಟುಮಾಡಿದೆ. ಜೂನ್ 6ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ಎಂಎಲ್ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ನಿಷೇಧಿಸಲಾಗಿದೆ.