ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆಯುತ್ತಿದೆ. ಎಲ್ಲರೂ ತಮ್ಮ ಮತ ಚಲಾಯಿಸಲು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ.
ಈ ಗ್ರಾಮಗಳಲ್ಲಿ ಯಾವುದೇ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಚುನಾವಣೆ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ.