ಲೋಕಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳಂತೆ ಚುನಾವಣಾ ಆಯೋಗವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆಗೆ ಯಾವುದೇ ತೊಂದರೆ ಆಗಬಾರದೆಂದು ಚುನಾವಣಾ ಆಯೋಗವು ನಾನಾ ಕಸರತ್ತುಗಳನ್ನು ಮಾಡ್ತಿದೆ. ಈ ಹಿನ್ನೆಲೆ ನಂದಿ ಹಿಲ್ಸ್ ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಆಡಳಿತ ಮಂಡಳಿ ಮತದಾನದ ದಿನದಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದೆ.
ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನ ನಡೆಯುವ ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ- ಕಾಲೇಜಗಳು, ಎಲ್ಲಾ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಇನ್ನಿತರ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.