ಲಂಡನ್ : ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ಅಪ್ರಾಪ್ತನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಡನ್ನ ಹೈನಾಲ್ಟ್ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, 36 ವರ್ಷದ ಆರೋಪಿ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದಾಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.