ದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಮೇ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 19 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1,825.50 ರೂ. ಇಳಿದಿದೆ.
ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,745.50 ರೂ. ಆಗಿದೆ. ಹಿಂದೆ 1,764.50 ರೂ. ಆಗಿತ್ತು. ಮುಂಬೈಯಲ್ಲಿಯೂ 19 ರೂ. ಇಳಿಕೆಯಾಗಿದ್ದು, ಹೊಸ ಬೆಲೆಯನ್ನು 1, 698.50 ರೂ. ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,911 ರೂ., ಕೋಲ್ಕತ್ತಾದಲ್ಲಿ 20 ರೂ.ಗಳ ಕಡಿತದ ನಂತರ 1,859 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ.