ಪ್ರಭಾಕರನ್ ನಾಯಕತ್ವದ ಎಲ್ಟಿಟಿಇ ಸಂಘಟನೆ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳ ಕಾಲ ವಿಸ್ತರಿಸಿದೆ. ಎಲ್ಟಿಟಿಇ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರವು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಎಲ್ಟಿಟಿಇ ಜನಸಾಮಾನ್ಯರಲ್ಲಿ ಪ್ರತ್ಯೇಕತಾ ಪ್ರವೃತ್ತಿಯನ್ನು ಬೆಳೆಸುತ್ತಿದೆ ಮತ್ತು ಭಾರತದಲ್ಲಿ ವಿಶೇಷವಾಗಿ ತಮಿಳುನಾಡಿನಲ್ಲಿ ಅದಕ್ಕೆ ಬೆಂಬಲದ ನೆಲೆಯನ್ನು ಹೆಚ್ಚಿಸುತ್ತಿದೆ ಎನ್ನಲಾಗಿದೆ.
ಎಲ್ಟಿಟಿಇ ದೇಶದ ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 1967 ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 3 ರ ಉಪ-ವಿಭಾಗ (1) ಮತ್ತು (3) ಅನ್ನು ಅನ್ವಯಿಸಿ ಕೇಂದ್ರ ಗೃಹ ಸಚಿವಾಲಯವು ನಿಷೇಧವನ್ನು ವಿಧಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಕೇಂದ್ರ ಸರ್ಕಾರವು ಅಭಿಪ್ರಾಯಪಟ್ಟಿದೆ.