ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ್ ಲಾಲ್ವಾನಿ 11. 75 ಲಕ್ಷ ಮತಗಳ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 2.18 ಲಕ್ಷ ಮತದಾರರು ‘ಮೇಲಿನ ಯಾವುದೂ ಅಲ್ಲ’ ಆಯ್ಕೆಯನ್ನು ಆರಿಸಿಕೊಂಡು ನೋಟಾ ದಾಖಲೆ ಸೃಷ್ಟಿಸಿದ ಸ್ಪರ್ಧೆಯಲ್ಲಿ ಇಂದೋರ್ನ ಬಿಜೆಪಿಯ ಹಾಲಿ ಸಂಸದ ಶಂಕರ್ ಲಾಲ್ವಾನಿ ಅವರು ಮಂಗಳವಾರ 11,75,092 ಮತಗಳ ದಾಖಲೆಯ ಅಂತರದಿಂದ ಜಯಗಳಿಸಿದ್ದಾರೆ.
ಏಪ್ರಿಲ್ 29 ರಂದು ತನ್ನ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ನಾಮಪತ್ರವನ್ನು ಹಿಂತೆಗೆದುಕೊಂಡು ಬಿಜೆಪಿ ಸೇರಿದ ನಂತರ, ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಆಘಾತ ಉಂಟಾಗಿತ್ತು. ನೋಟಾ ಆಯ್ಕೆಯನ್ನು ಒತ್ತುವಂತೆ ಜನರಿಗೆ ಕಾಂಗ್ರೆಸ್ ಮನವಿ ಮಾಡಿತ್ತು.
ಬಿಜೆಪಿಯ ಹಾಲಿ ಸಂಸದ ಶಂಕರ್ ಲಾಲ್ವಾನಿ ಅವರ ಗೆಲುವಿನ ಅಂತರ ಬಹುಶಃ ದೇಶದ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.