ನಾಂದೇಡ್ : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಸೋಲಲಿದ್ದು, ಆ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರದ ನಾಂದೇಡ್ನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಮೊದಲ ಹಂತದ ಲೋಕಸಭಾ ಚುನಾವಣೆ ಸಂಬಂಧ ಲಭ್ಯವಿರುವ ಮಾಹಿತಿಯು ಎನ್ಡಿಎ ಪರವಾಗಿ ಸೂಚನೆ ಸಿಕ್ಕಿದೆ. ರಾಹುಲ್ ಗಾಂಧಿ ಅಮೇಥಿ ಸೋತ ನಂತರ ವಯನಾಡನ್ನು ಕಳೆದುಕೊಳ್ಳಲಿದ್ದಾರೆ. ಏಪ್ರಿಲ್ 26 ರ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದರು.
ಈ ವೇಳೆ ಸೋನಿಯಾ ಗಾಂಧಿ ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಇಂಡಿಯಾ ಮೈತ್ರಿಕೂಟದ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲದ ಕಾರಣ ಲೋಕಸಭೆ ತೊರೆದು ರಾಜ್ಯಸಭೆಗೆ ತೆರಳಿದ್ದಾರೆ. ಇದೇ ಮೊದಲ ಬಾರಿಗೆ ಆ ಕುಟುಂಬಸ್ಥರು ವಾಸಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದಿಲ್ಲ. ಏಕೆಂದರೆ ಅಲ್ಲಿ ಪಕ್ಷದ ಅಭ್ಯರ್ಥಿಯೇ ಇಲ್ಲ ಎಂದು ಹೇಳಿದ್ರು.