- ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ದೇವೇಂದ್ರ ಫಡ್ನವೀಸ್
- ಮಹಾರಾಷ್ಟ್ರದ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ
ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಳಪೆ ಕಳಪೆ ಪ್ರದರ್ಶನ ತೋರಿರುವ ಕಾರಣ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಹಾರಾಷ್ಟ್ರದ ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪಮುಖ್ಯಮಂತ್ರಿ ಸ್ಥಾನದಿಂದ ನಿಯುಕ್ತಿಗೊಳಿಸುವುದಾಗಿ ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸುತ್ತೇನೆ. ಪಕ್ಷದ ಸಂಘಟನೆಗೆ ನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.