ಈ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಜಾರ್ಖಾಂಡ್ ನ ಹಜಾರಿಬಾದ್ ನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಡಿಕ್ಟೆಟೇರ್ ಆಡಳಿತವಿದೆ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶದಲ್ಲಿ ಅಪಾಯವಿದೆ. ಎನ್ಡಿಎ ಮೈತ್ರಿಕೂಟ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆ ಇರಲ್ಲ. ನಿಮಗೆ ಮೂಲಭೂತ ಹಕ್ಕುಗಳು ಸಿಗುವುದಿಲ್ಲ. ಮೋದಿಗೆ ಮತ ನೀಡಿದ್ರೆ ಗುಲಾಮರಾಗ್ತಿರಿ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.