ಮಂಡ್ಯ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಂಡ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ್ಯಾಂತ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ಭಾವಚಿತ್ರವುಳ್ಳ ಬ್ಯಾನರ್ ಅಳವಡಿಸಿ ಜೆಡಿಎಸ್ ಕಾರ್ಯಕರ್ತರು ಸ್ವಾಗತ ಕೋರಿದ್ದರು. ಆದರೆ ಜೆಡಿಎಸ್ ಕಾರ್ಯಕರ್ತರು ಆಳವಡಿಸಿದ್ದ ಬ್ಯಾನರ್ ಗಳನ್ನು ಕಿಡಿಗೇಡಿ ಹರಿದು ಹಾಕಿದ್ದು, ಜೆಡಿಎಸ್ ಕಾರ್ಯಕರ್ತರು ಆಕ್ರೋಶಕ್ಕೆ ಕಾರಣವಾಗಿದೆ.