ಮಂಡ್ಯ: ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದು ನಾವೆಲ್ಲರೂ ಡಿಜಿಟಲ್ ಯುಗದಲ್ಲಿದ್ದರೂ ಕೂಡ ಕರ್ನಾಟಕದ ಹಲವು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಪ್ರಚಲಿತದಲ್ಲಿದೆ. ಮಂಡ್ಯದ ಹನಕೆರೆ ಗ್ರಾಮದಲ್ಲಿ ಸವರ್ಣಿಯರ ವಿರೋಧದ ನಡುವೆಯೂ ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ದಲಿತರು ದೇವಸ್ಥಾನ ಪ್ರವೇಶಿಸಿರುವ ಘಟನೆಯೊಂದು ನಡೆದಿದೆ. ಸದ್ಯ ಗ್ರಾಮದಲ್ಲಿ ಭೂದಿ ಮುಚ್ಚಿದ ಕೆಂಡಂತಹ ಪರಿಸ್ಥಿತಿ ಎದುರಾಗಿದೆ.
ಮಂಡ್ಯದ ಹನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ದಲಿತರ ದೇವಾಲಯ ಪ್ರವೇಶಕ್ಕೆ ಹಿಂದಿನಿಂದಲೂ ನಿರ್ಬಂಧ ಇದೆ. ಕಳೆದ ಎರಡುವರೆ ವರ್ಷಗಳ ಹಿಂದೆ ದೇವಾಲಯ ಪುನರ್ ನಿರ್ಮಾಣ ಮಾಡಲಾಗಿದೆ. ನಂತರ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ್ದ ದೇವಾಲಯ. ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುತ್ತುದ್ದಂತೆ ದಲಿತರ ಪ್ರವೇಶಕ್ಕೆ ಅವಕಾಶ ಕೊಡುವಂತೆ ಪಟ್ಟು ಹಿಡಿದಿದ್ದಾರೆ.
ಇದನ್ನು ಓದಿ:ಸಚಿವ ಜಮೀರ್ ಅಹ್ಮದ್ಗೆ ಗವರ್ನರ್ ಶಾಕ್!
ದಲಿತರ ದೇವಾಲಯ ಪ್ರವೇಶಕ್ಕೆ ಒಪ್ಪದ ಗ್ರಾಮದ ಸವರ್ಣೀಯರು, 2 ಬಾರಿ ನಡೆಸಿದ ಶಾಂತಿ ಸಭೆಯೂ ವಿಫಲವಾಗಿದೆ, ಇಂದು ಪೊಲೀಸರ ಬಿಗಿ ಭದ್ರತೆ ನಡುವೆ ದಲಿತರು ದೇವಾಲಯ ಪ್ರವೇಶಿಸಿದ್ದಾರೆ. ದಲಿತರ ದೇವಾಲಯ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸವರ್ಣೀಯರು, ದೇವಾಲಯದ ಒಳಗೆ ನುಗ್ಗಿ ಉತ್ಸವ ಮೂರ್ತಿ ಹೊತ್ತುತಂದಿದ್ದಾರೆ. ದೇವಾಲಯದ ಹೆಸರಿನ ಫಲಕ ತಂದು ಆಚೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನು ಓದಿ:ಯಶವಂತಪುರ ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ!
ದೇವಾಲಯ ಅವರೇ ಇಟ್ಟುಕೊಳ್ಳಲಿ, ದೇವರನ್ನು ನಾವು ತೆಗೆದುಕೊಂಡು ಹೋಗ್ತೀವಿ. ಎಲ್ಲರೂ ಕೂಲಿ ಮಾಡಿ ಸಂಪಾದಿಸಿದ ಹಣ ಕೊಟ್ಟು ದೇವಾಲಯ ನಿರ್ಮಾಣ ಮಾಡಿದ್ದೇವೆ. ಈಗ ಏಕಾಏಕಿ ನಮ್ಮ ಸಂಪ್ರದಾಯ ಮುರಿದರೆ ಹೇಗೆ. ದೇವರ ಮೂರ್ತಿ ವಾಪಾಸ್ ಇಡುವಂತೆ ಕೇಳಿದ ಅಧಿಕಾರಿಗಳ ಮುಂದೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ದೇವಾಲಯದ ಬಳಿಯೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.