ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ಡಿವೈಎಸ್ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ ಪ್ರಭಾರ ಡಿವೈಎಸ್ಪಿ ಆಗಿ ಶಿವಮೂರ್ತಿ ನೇಮಕ ಮಾಡಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಾಗಮಂಗಲ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಮತ್ತೊಬ್ಬ ಅಧಿಕಾರಿಯ ಅಮಾನತು ಮಾಡಲಾಗಿದೆ.