ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ, ಮತ್ತೋರ್ವನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ ದಿಬ್ಬ ಸಡಿಲಗೊಂಡು ಅನಾಹುತ ಸಂಭವಿಸಿದೆ.
ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದುರ್ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದು, ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ.