- ಮೆಕ್ಕಾದಲ್ಲಿ 50 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ
- ಹಜ್ ಯಾತ್ರೆಗೆ ತೆರಳಿದ್ದ 550 ಮಂದಿ ಸಾವು
ಮೆಕ್ಕಾದಲ್ಲಿ ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಹಜ್ ಯಾತ್ರೆಗೆ ತೆರಳಿದ್ದ 550 ಮಂದಿ ಸಾವನ್ನಪ್ಪಿದ್ದಾರೆ. ಮುಸ್ಲಿಮರ ಪವಿತ್ರ ಯಾತ್ರೆ ಎಂದೇ ಕರೆಸಿಕೊಳ್ಳುವ ಹಜ್ ಯಾತ್ರೆ ಜೂನ್ 14ರಿಂದ ಪ್ರಾರಂಭವಾಗಿತ್ತು. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ, ವರ್ಷ ಭೇಟಿ ನೀಡುತ್ತಾರೆ.
ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಮೃತಪಟ್ಟವರಲ್ಲಿ ಸಾಕಷ್ಟು ಮಂದಿ ಈಜಿಪ್ಟ್ ನಾಗರಿಕರು ಎನ್ನಲಾಗಿದೆ.
ಕನಿಷ್ಠ 60 ಯಾತ್ರಿಕರು ಬಿಸಿಲಿನ ತಾಪದಿಂದ ಸಾವನ್ನಪ್ಪಿದ್ದಾರೆ. ಪ್ರತಿ ವರ್ಷವೂ ಹಜ್ ಯಾತ್ರೆಯ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯೆಸ್ನಷ್ಟಿರುತ್ತಿತ್ತು ಈ ಬಾರಿ ಭಾರಿ ಏರಿಕೆ ಕಂಡಿದೆ.