ಮಣಿಪುರ : ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಶಂಕಿತ ಕುಕಿ ದಂಡುಕೋರರ ಗುಂಪುವೊಂದು ದಾಳಿ ಮಾಡಿದ್ದು, ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ ಭದ್ರತಾ ಪಡೆಯನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಲಾಯಿತು.
ಔಟ್ಪೋಸ್ಟ್ನಲ್ಲಿ ಬಾಂಬ್ ದಾಳಿಯನ್ನು ನಡೆಸಲಾಗಿದ್ದು, ಇದರಿಂದ ನಾಲ್ವರು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ತಕ್ಷಣ ಚಿಕಿತ್ಸೆ ನೀಡಿದರೂ ಕೂಡ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಹುತಾತ್ಮ ಯೋಧರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಗೆ ಸೇರಿದವರು. ಈ ಇಬ್ಬರು ನರಂಸೇನಾದಲ್ಲಿ ನೆಲೆಸಿದ್ದರು. ಮೃತರನ್ನು ಸಿಆರ್ಪಿಎಫ್ ಸಬ್- ಇನ್ಸ್ಪೆಕ್ಟರ್ ಎನ್ ಸರ್ಕಾರ್ ಮತ್ತು ಹೆಡ್ ಕಾನ್ಸ್ಟೆಬಲ್ ಅರುಫ್ ಸೈನಿ ಎಂದು ಗುರುತಿಸಲಾಗಿದೆ. ಬಾಂಬ್ ದಾಳಿಯಲ್ಲಿ ಗಾಯಗೊಂಡವರು, ಇನ್ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್ಸ್ಟೇಬಲ್ ಅಫ್ತಾಬ್ ದಾಸ್ ಎಂದು ಹೇಳಲಾಗಿದೆ.