ಮಾಸ್ಕೋದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನನ್ನ ಮೂರನೇ ಅವಧಿಯಲ್ಲಿ ಮೂರು ಪಟ್ಟು ವೇಗವಾಗಿ ಮತ್ತು ಮೂರು ಪಟ್ಟು ಹೆಚ್ಚು ಶಕ್ತಿಯೊಂದಿಗೆ ಕೆಲಸ ಮಾಡಲು ನಾನು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿರುವ ಅಭಿವೃದ್ಧಿಯ ವೇಗವನ್ನು ನೋಡಿ ಇಡೀ ವಿಶ್ವವೇ ಬೆರಗಾಗಿದೆ ಎಂದು ಹೇಳಿದರು.
ರಷ್ಯಾದೊಂದಿಗೆ ಭಾರತದ ಸಂಬಂಧವು ಪರಸ್ಪರ ನಂಬಿಕೆ ಮತ್ತು ಗೌರವವನ್ನು ಆಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ತಡರಾತ್ರಿ ಮೋದಿ ಅವರನ್ನು ಸ್ವಾಗತಿಸಿದ್ದು, ಅಧಿಕೃತ ಮಾತುಕತೆಗೆ ಮುಂಚಿತವಾಗಿ ಅವರ ನಿವಾಸದ ಸುತ್ತಲೂ ತೋರಿಸಲು ಕರೆದುಕೊಂಡು ಹೋಗಿದ್ದರು.
ಪ್ರತಿಯೊಬ್ಬ ಭಾರತೀಯನೂ ರಷ್ಯಾವನ್ನು ವಿಶ್ವಾಸಾರ್ಹ ಸ್ನೇಹಿತನಂತೆ ನೋಡುತ್ತಾನೆ. ಒಳ್ಳೆಯ ಮತ್ತು ಕೆಟ್ಟ ಸಮಯದ ಒಡನಾಡಿ. ಭಾರತ-ರಷ್ಯಾ ಸಂಬಂಧಗಳನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಅಧ್ಯಕ್ಷ ಪುಟಿನ್ ಅವರನ್ನು ನಾನು ಶ್ಲಾಘಿಸುತ್ತೇನೆ. ಭಾರತ-ರಷ್ಯಾ ಸ್ನೇಹವು ಯಾವಾಗಲೂ ಸಕಾರಾತ್ಮಕವಾಗಿರುತ್ತದೆ ಎಂದು ಮೋದಿ ಹೇಳಿದ್ದಾರೆ.