ಮೈಸೂರು ಅಭಿವೃದ್ಧಿ ಪ್ರಾಧಿಕಾರ ನೀವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ.
ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾಣಸಿಕೊಂಡಿಲ್ಲ. ಈ ಮೂಲಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಷರತ್ತನ್ನು ಬಿಜೆಪಿ ಪಾಲಿಸಿದೆ ಎನ್ನಬಹುದು.
ಪಾದಯಾತ್ರೆಗೆ ಆರಂಭದಲ್ಲೇ ವಿಘ್ನ ಬಂದಿದ್ದರಿದ್ದ, ಎಚ್ಚತ್ತ ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಹೆಚ್ಡಿ ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ರಾಜಿಸಂಧಾನ ಮಾಡಿದರು. ಈ ವೇಳೆ ಹೆಚ್ಡಿ ಕುಮಾರಸ್ವಾಮಿ ಹೈಕಮಾಂಡ್ ಮುಂದೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿದ್ದರು. ಅದರಂತೆ ಇದೀಗ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪ್ರೀತಂಗೌಡ ಭಾಗಿಯಾಗಲಿಲ್ಲ.