ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮುಡಾ ಕೇಸ್ಗೆ ಸಂಬಂಧಿಸಿದಂತೆ ಬಿಗ್ ಡೇ ಆಗಲಿದೆ. ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ.
ಸದ್ಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಮುಡಾ ಪ್ರಕರಣದ ಮಾಹಿತಿಯನ್ನ ಇಡಿ ಹಂಚಿಕೊಂಡಿದೆ. ನಾಳೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿಗೆ ಸಂಬಂಧಿಸಿದ ವಿಚಾರಣೆ ಏನೂ ಇಲ್ಲ ಆದರೆ ಇಡಿಯ ಪತ್ರವನ್ನು ಸಿಎಂ ಪರ ವಕೀಲರು ರಾಜಕೀಯ ಪ್ರೇರಿತವೆಂದು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಬಹುದು.
ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಕೂಡ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಮೇಲ್ಮನೆ ಸಲ್ಲಿಸಿದ್ಧಾರೆ. ಹೀಗಾಗಿ ನಾಳಿನ ವಿಚಾರಣೆಯ ಮೇಲೆ ಅಷ್ಟೇನೂ ಪರಿಣಾಮ ಬೀರುವುದಿಲ್ಲ. ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಆ ಕೇಸಿನ ವಿಚಾರಣೆಯ ವೇಳೆ ಲೋಕಾಯುಕ್ತ ತನಿಖೆಯ ವರದಿಯನ್ನು ಸಲ್ಲಿಸಬೇಕು. ಆಗ ಇಡಿ ಬರೆದಿರುವ ಪತ್ರ ಮಹತ್ವ ಪಡೆಯುವ ಸಾಧ್ಯತೆ ಇದೆ. ಹಾಗಾಗಿ ಇಡಿ ಅಧಿಕಾರಿಗಳು ಲೋಕಾಯುಕ್ತಕ್ಕೆ ಬರೆದಿರುವ ಪತ್ರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.