ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೆ ಆಗಿರುವ ಹಗರಣ ಎಂದು ಆರೋಪಿಸಿರುವ ಪ್ರಹ್ಲಾದ್ ಜೋಷಿ ಜಾಗ ವರ್ಗಾವಣೆ ನಿರ್ಧಾರ ಆಗಿದ್ದು 2017ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನು ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾಧಿಕಾರಿಯನ್ನು ಏಕೆ ವರ್ಗಾವಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗನ ಅನುಮತಿ ಇಲ್ಲದೆ ಇದು ನಡೆಯಲು ಸಾಧ್ಯವಿಲ್ಲ. ಸ್ವಂತಕ್ಕೆ ಲಾಭ ಮಾಡಿಕೊಳ್ಳಲು ನಡೆದ ದೊಡ್ಡ ಪ್ರಮಾಣದಲ್ಲಿ ನಡೆದ ಭ್ರಷ್ಟಾಚಾರ ಹೀಗಾಗಿ ಪ್ರಕರಣದ ತನಿಖೆಗೆ ಸಿಬಿಐ ಗೆ ವಹಿಸಿಬೇಕು ಎಂದು ಅವರು ಒತ್ತಾಯಿಸಿದರು.