ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಆದರೆ, ತರಗತಿಯೊಳಗೆ ಹುಡುಗಿಯರು ಯಾವುದೇ ರೀತಿಯ ಬುರ್ಖಾವನ್ನು ಧರಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಕ್ಯಾಂಪಸ್ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿಯಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಮಹಿಳಾ ಸಬಲೀಕರಣ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಹಿಜಾಬ್ಗಳು, ಬುರ್ಖಾಗಳು, ಸ್ಟೋಲ್ಗಳು ಮತ್ತು ಕ್ಯಾಪ್ಗಳನ್ನು ಧರಿಸುವುದನ್ನು ನಿಷೇಧಿಸುವ ಮುಂಬೈ ಕಾಲೇಜಿನ ನಿಷೇಧಕ್ಕೆ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.