ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು ತಜ್ಞರು ಮೃತದೇಹವನ್ನು ಹೊರತೆಗೆದಿದ್ದು, ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.
ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.
ಮುಮ್ತಾಜ್ ಭಾನುವಾರ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಡವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ.
ಇನ್ನು ಈ ಕೇಸ್ ಹಿಂದೆ ಮಹಿಳೆಯ ಕೈವಾಡ ಇದೆ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ. ಮುಮ್ತಾಜ್ ಅಲಿ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು. ಇನ್ನು ಇತ್ತೀಚೆಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಘಟನೆ ಸಂಬಂಧ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.