ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬರುವ ಹೊತ್ತಿಗೆ, ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನಗೆ 14 ದಿನ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನವನ್ನ ವಿಸ್ತರಿಸಿ ಆದೇಶ ಹೊರಡಿಸಿದೆ.
ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.