ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಇವೆ. ನಾಳೆ ರಿಲೀಸ್ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಟ್ರ್ಯಾಕ್ಟರ್ ಹಾಗೂ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ದೊಡ್ಡ ಮಟ್ಟದಲ್ಲೇ ಸದ್ದು ಮಾಡುತ್ತಿದೆ. ಮುನಿರತ್ನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಇವೆ. ನಾಳೆ ರಿಲೀಸ್ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋ ಬಿಡುಗಡೆ ಮಾಡುತ್ತೇನೆ. ನಾಳೆ 2 ಆಡಿಯೋ ರಿಲೀಸ್ ಮಾಡುತ್ತೇನೆ ಎಂದಿದ್ದಾರೆ.