ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ.
ಪೆನ್ಡ್ರೈವ್ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ.
ನಮ್ಮ ಸರ್ಕಾರದ ಬಗ್ಗೆ ಅವರು ಮಾತಾಡೋದು ಬಿಟ್ಟು ಅವರ ಸರ್ಕಾರ ಉಳಿಸಿಕೊಳ್ಳಲಿ.
ಜೆಡಿಎಸ್ – ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಆಗುವುದಿಲ್ಲ. ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಪರವಾದ ವಾತಾವರಣವಿದೆ. ಹೀಗಾಗಿ 6 ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೆವು. ಮತದಾರರನ್ನು ಬೇಟಿಯಾಗಲು ಅವರಿಗೆ ಸಾಕಷ್ಟು ಸಮಯ ಸಿಕ್ಕಿದೆ ಎಂದರು.
ಪೆನ್ಡ್ರೈವ್ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರು. ಯಾರು ಸರಿ, ಯಾರು ಸರಿ ಇಲ್ಲ ಎನ್ನುವುದನ್ನು ನಿರ್ಧರಿಸುತ್ತಾರೆ. ಸರ್ಕಾರದ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಪೆನ್ಡ್ರೈವ್ ಇದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಕೇಸ್. ನಾನು ಅದರ ಬಗ್ಗೆ ಮಾತಾಡಲ್ಲ. ಸರ್ಕಾರ ಪತನ ವಿಚಾರವನ್ನ ಒಂದು ವರ್ಷದಿಂದ ಹೇಳ್ತಾ ಇದ್ದಾರೆ.. ನಮ್ಮ ಸರ್ಕಾರದ ಬಗ್ಗೆ ಅವರು ಮಾತಾಡೋದು ಬಿಟ್ಟು ಅವರ ಸರ್ಕಾರ ಉಳಿಸಿಕೊಳ್ಳಲಿ. ನಮ್ಮಲ್ಲಿ ಒಳಗೂ ಜಗಳ ಇಲ್ಲ, ಹೊರಗೂ ಜಗಳ ಇಲ್ಲ ಎಂದರು.