ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ನವೆಂಬರ್ 6 ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರ್ ಆಗುವಂತೆ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ A2,A3,A4 ವಿಚಾರಣೆ ನಡೆಸಲಾಗಿದೆ. ಕಳೆದ ವಾರ A2 ಸಿಎಂ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯಗೊಂಡಿದೆ. ಇದೀಗ A1 ಆರೋಪಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಲಾಗಿದೆ. ಖುದ್ದು ಲೋಕಾಯುಕ್ತ ಎದುರು ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಈಗಾಗಲೇ ಲೋಕಾಯುಕ್ತ ಮುಡಾ ಹಗರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯನವರ ಸರದಿ ಬಂದಿದೆ. ಇನ್ನು ಸಿದ್ದರಾಮಯ್ಯ ಅವರ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದರೆ ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ 40 ವರ್ಷ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ಈಗಾಗಲೇ ನಡೆಸಿದೆ.