ಮುಡಾ ಹಗರಣವನ್ನು ಸಿಬಿಐಗೆ ವಹಿಸಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿದ್ದು ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ, ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಮುಡಾ ಅಕ್ರಮದ ಬಗ್ಗೆ ಈಗಾಗಲೇ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾದರೆ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.