ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣವು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾಗದ ತುತ್ತಾಗಿದೆ. ಈ ಮುಡಾ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರನ್ನು ಈಗ ವರ್ಗಾವಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಕೆ ವಿ ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾದ್ದ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.