ಮೈಸೂರು : ಕರುನಾಡಿನ ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್ ಒಡೆಯರ್ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.