ಬಿಎಸ್ವೈ ರಾಜಕೀಯ ನಿವೃತ್ತಿ ತಗೊಳ್ಳಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಸಿದ್ದರಾಮಯ್ಯ ಈಗ ಮನಬಂದಂತೆ ಮಾತಾಡುತ್ತಿದ್ದಾರೆ, ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ ಎಂದು ಮಾತಿನ ಚಾಟಿ ಬೀಸಿದ್ದಾರೆ.
ಪೊಕ್ಸೋ ಕೇಸ್ನಲ್ಲಿ ನಾಳೆ ಕೋರ್ಟ್ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಸಿಎಂ ತಮ್ಮ ಪತ್ನಿಗೆ ಬೆಲೆ ಬಾಳುವ ಸೈಟ್ಗಳನ್ನು ಕೊಟ್ಟಿದ್ದಾರೆ. ಇದು ಅಕ್ಷಮ್ಯ ಅಪರಾಧ, ಅದರ ವಿರುದ್ಧ ಬಿಜೆಪಿ-ಜೆಡಿಎಸ್ ಐತಿಹಾಸಿಕ ಪಾದಯಾತ್ರೆ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.