ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಇದೇ ಸಂದರ್ಭದಲ್ಲಿ ಸಂಪ್ರದಾಯದಂತೆ ರಾಜ್ಯದ ಮುಖ್ಯಸ್ಥರನ್ನ ಆಹ್ವಾನಿಸುವುದು ಕೂಡ ಪದ್ದತಿ. ಅದರಂತೆ ಮೈಸೂರಿನ ಜಿಲ್ಲಾಡಳಿತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರನ್ನ ಆಹ್ವಾನಿಸಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಸಕರುಗಳು ಹಾಗೂ ಸ್ಥಳೀಯ ನಾಯಕರು ಸಿಎಂ ಹಾಗೂ ಡಿಸಿಎಂ ಗೆ ಆಹ್ವಾನ ನೀಡಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಎಂದಿನಂತೆ ಈ ವರ್ಷವೂ ನಾಡಹಬ್ಬ ದಸರಾವನ್ನು ಸಾಂಪ್ರದಾಯಿಕವಾಗಿ, ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದ ಸಮಸ್ತರ ಮೇಲಿರಲಿ ಎಂದು ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.