ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಹಗರಣದ ಮಾದರಿಯಲ್ಲೇ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲೂ ನಡೆದಿರುವ ನೂರಾರು ಕೋಟಿ ರುಪಾಯಿ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸಾಲ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳ 200 ಕೋಟಿ ರುಪಾಯಿಗೂ ಹೆಚ್ಚು ಹಣ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ. ತನಿಖೆಗೆ ಆಗ್ರಹಿಸಿ ಧರಣಿ ನಡೆಸುವೆ ಎಂದು ಹೇಳಿದ್ದಾರೆ