ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿರುವ ಫ್ಲವರ್ ಶೋ ನೋಡಲು ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ನೀಡಲು ಮುಂದಾಗಿದೆ. ಇದೇ ಆಗಸ್ಟ್ 15, 17 ಮತ್ತು 18 ರಂದು ಲಾಲ್ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಟೋಕನ್ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳನ್ನು ನೀಡಲಾಗುವುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಲಾಲ್ಬಾಗ್ ಮೆಟ್ರೋ ನಿಲ್ದಾಣದಲ್ಲಿ ವಿತರಿಸುವ ಈ ರಿಟರ್ನ್ ಜರ್ನಿ ಟಿಕೆಟ್ಗಳನ್ನು 30 ರೂಪಾಯಿ ನಗದು ನೀಡಿ ಪಡೆಯಬಹುದು. ಇನ್ನು ಈ ಪೇಪರ್ ಟಿಕೆಟ್ಗಳು ಖರೀದಿಸಿದ ದಿನದಂದು ಲಾಲ್ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್ಗಳ ಮೂಲಕ ಲಾಲ್ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು.
ಆಗಸ್ಟ್ 15, 16 ಹಾಗೂ 17 ರಂದು ನಿಗದಿತ ಅವಧಿಯಲ್ಲಿ ಲಾಲ್ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್ಗಳನ್ನು ನೀಡಲಾಗುವುದಿಲ್ಲ. ಟಿಕೆಟ್ಗಳನ್ನು ಖರೀದಿಸಲು ಸರತಿಯಲ್ಲಿ ನಿಂತು ಕಾಯುವುದನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್ಗಳನ್ನು ಖರೀದಿಸಬೇಕು ಎಂದು ಬಿಎಂಆರ್ಸಿಎಲ್ ವಿನಂತಿಸಿದೆ.