ದರ ಏರಿಕೆಗೆ ಕಂಗಾಲಾಗಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಂಭವವಿದೆ . ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಮತ್ತೆ ಕೆಎಂಎಫ್ ಹಾಲಿನ ದರ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. “ಆದರೆ, ಕೆಲ ದಿನಗಳ ಹಿಂದೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದರು”. ಆದರೆ, ಇದೀಗ ಭೀಮಾ ನಾಯ್ಕ್ ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.