ಜಮ್ಮು ಕಾಶ್ಮೀರದಲ್ಲಿ ಇಂದು ಎರಡು ಬಾರಿ ಭೂಮಿ ಕಂಪಿಸಿದೆ. 4.9 ಹಾಗೂ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ಆಳವು 5 ಕಿ.ಮೀ ಎಂದು ಹೇಳಲಾಗುತ್ತಿದೆ.
ಪ್ರಬಲ ಭೂಕಂಪದಿಂದಾಗಿ ಜನರಲ್ಲಿ ಭೀತಿ ಉಂಟಾಗಿದೆ, ಜನರು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದರು. ಮುಂಜಾನೆ ಸಂಭವಿಸಿದ ಈ ಭೂಕಂಪದಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.1 ಎಂದು ಅಳೆಯಲಾಗಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ 10 ಕಿಲೋಮೀಟರ್ ಕೆಳಗೆ ಇತ್ತು.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 6:45 ರ ಸುಮಾರಿಗೆ ಈ ಪ್ರದೇಶದಲ್ಲಿ ಭೂಕಂಪನದ ಅನುಭವವಾಯಿತು. ಭೂಕಂಪದ ಕೇಂದ್ರಬಿಂದು 5 ಕಿಲೋಮೀಟರ್ ಆಳದಲ್ಲಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.2 ಎಂದು ಅಳೆಯಲಾಗಿತ್ತು. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾಗಿರಲಿಲ್ಲ. ರಾತ್ರಿ 9:35ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಈ ಹಿಂದೆ ಡಿಸೆಂಬರ್ನಲ್ಲಿಯೂ ಭೂಕಂಪ ಸಂಭವಿಸಿತ್ತು.