- ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರುನೇಮಕ
- ಕೆ. ಮಿಶ್ರಾ ಅವರನ್ನು ಪ್ರಧಾನಿ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ
ಕೇಂದ್ರ ಸರ್ಕಾರವು ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ 3ನೇ ಬಾರಿಗೆ ಮರುನೇಮಕ ಮಾಡಿದ್ದಾರೆ. 1968ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಅಜಿತ್ ದೋವಲ್ ಅವರನ್ನು ಗುರುವಾರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಖಚಿತಪಡಿಸಿದೆ.
ಸಂಪುಟದ ನೇಮಕಾತಿ ಸಮಿತಿಯು 1972ರ ಬ್ಯಾಚ್ನ ನಿವೃತ್ತ ಅಧಿಕಾರಿಯಾದ. ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ. ಪಿಎಂ ನರೇಂದ್ರ ಮೋದಿಯವರು ಡಾ. ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರುನೇಮಕಗೊಳಿಸುವುದರೊಂದಿಗೆ ಇಬ್ಬರು ನಿವೃತ್ತ ಅಧಿಕಾರಿಗಳು ಪ್ರಧಾನ ಮಂತ್ರಿಗಳಿಗೆ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಸಲಹೆಗಾರರಾಗಿದ್ದಾರೆ.