ಹುಬ್ಬಳ್ಳಿ ನೇಹಾ ಹಿರೇಮಠ್ ಬರ್ಬರ ಹತ್ಯೆಗೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ಈ ಪ್ರಕರಣದ ವಿರುದ್ಧ ಸ್ಯಾಂಡಲ್ವುಡ್ ಕೂಡ ಧ್ವನಿ ಎತ್ತಿದೆ. ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿ ಅನೇಕರು ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಿಯಾದ ತನಿಖೆಯಾಗಬೇಕು ಎಂದಿದ್ದಾರೆ. ಹಾಗೆಯೇ #JusticeForNeha ಎಂದು ಹ್ಯಾಶ್ಟ್ಯಾಗ್ ಹಾಕಿದ್ದಾರೆ.
ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡುವ ಮೂಲಕ ನೇಹಾ ಹಿರೇಮಠ್ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ. ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇನ್ನು ನಟ ಧ್ರುವ ಸರ್ಜಾ ಟ್ವೀಟ್ ಮಾಡುವ ಮೂಲಕ ಸಹೋದರಿ ನೇಹಾ ಹಿರೇಮಠ್ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ನಲ್ಲಿ ಹತ್ಯೆ ಮಾಡಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು ಹಾಗೂ ಇದನ್ನ ಎಲ್ಲಾ ಆಯಮಾದಲ್ಲೂ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.