ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಅವಹೇಳನಕಾರಿ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲ ಆಗಿದೆ. ದೆಹಲಿಯಲ್ಲಿ ಹೊತ್ತಿಕೊಂಡ ಕಿಚ್ಚು..ಕರ್ನಾಟಕದ ನೆಲಮಂಗಲಕ್ಕೂ ಹಬ್ಬಿದೆ. ಅಮಿತ್ ಶಾ ಹೇಳಿಕೆ ಖಂಡಿಸಿ ನೆಲಮಂಗಲ ಶಾಸಕ ಎನ್ ಶ್ರೀನಿವಾಸ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿಆರ್ ಗೌಡ ಹಾಗೂ ನೆಲಮಂಗಲ ಯೋಜನಾ ಆಯೋಗದ ಅಧ್ಯಕ್ಷ ನಾರಾಯಣಗೌಡ ಅವರ ಸೂಚನೆ ಮೇರೆಗೆ, ನೆಲಮಂಗಲ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ಅಮಿತ್ ಶಾ ಅವರ ಹೇಳಿಕೆಯಿಂದ ದಲಿತ ಸಮುದಾಯ ಸೇರಿ, ಇಡೀ ದೇಶಕ್ಕೆ ಅಪಮಾನ ಆಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರೋ ಅಮಿತ್ ಶಾ ಅವರ ಹೇಳಿಕೆ ಖಂಡನೀಯ. ಕೂಡಲೇ ಅಮಿತ್ ಶಾ ಕ್ಷಮೆ ಕೇಳಿ..ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ನೆಲಮಂಗಲ ವಿಧಾನಸಭಾ ಕ್ಷೇತ್ರದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಗರ ಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು, ಎಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು, ಗ್ಯಾರಂಟಿ ಕಮಿಟಿ ಅಧ್ಯಕ್ಷರು, ಸದಸ್ಯರು ಹಾಗೂ ತಾಲೂಕಿನ ಕಾಂಗ್ರೆಸ್ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.