- ಪ್ರಜ್ವಲ ರೇವಣ್ಣ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ
- ಕಾಂಗ್ರೆಸ್ ಸರ್ಕಾರ ಪೆನ್ಡ್ರೈವ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ.
- ಪ್ರಜ್ವಲ ರೇವಣ್ಣರನ್ನು, ಹೆಚ್.ಡಿ ರೇವಣ್ಣರನ್ನು ಸಿಲುಕಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನೆಲಮಂಗಲ: ಹಾಸನ ಸಂಸದ ಪ್ರಜ್ವಲ ರೇವಣ್ಣ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿಂದು ಪ್ರತಿಭಟನೆ ನಡೆಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಸರ್ಕಾರ ಪೆನ್ಡ್ರೈವ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಎಸ್ಐಟಿಯನ್ನು ದುರ್ಬಳಕೆ ಮಾಡಿಕೊಂಡಿದೆ. ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಶಿವರಾಮೇಗೌಡರ ನಡುವಿನ ಆಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ಬೇಕೆಂದಲೇ ಪ್ರಜ್ವಲ ರೇವಣ್ಣರನ್ನು, ಎಚ್ ಡಿ ರೇವಣ್ಣರನ್ನು ಸಿಲುಕಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೆಲಮಂಗಲ ಮಾಜಿ ಶಾಸಕರಾದ ಡಾ.ಶ್ರೀನಿವಾಸ್ ಮೂರ್ತಿ ಹಾಗೂ ಎಂ.ವಿ. ನಾಗರಾಜುರವರು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.