ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.