ಒಡಿಶಾ : ಒಡಿಶಾದಲ್ಲಿ ನಡೆಸಿದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆ ಮೇಲೆ ಕಮಲಾ ಮಹಾರಾಣಾ ಎಂಬ ಮಹಿಳೆಯೊಬ್ಬರಿಗೆ ಮಂಡಿಯೂರಿ ನಮಸ್ಕರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆ ಮಹಿಳೆ ಹೆಸರು ಕಮಲಾ ಮಹಾರಾಣಾ. ಕಮಲಾ ಅವರು ತ್ಯಾಜ್ಯದಿಂದ ವಿವಿಧ ವಿಶಿಷ್ಟ ವಸ್ತುಗಳನ್ನು ತಯಾರಿಸುವಲ್ಲಿ ಪ್ರಸಿದ್ಧರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿನ್ನೆ ಚುನಾವಣಾ ರ್ಯಾಲಿ ನಡೆಸಲು ಕೇಂದ್ರಪಾರಕ್ಕೆ ತೆರಳಿದ್ದರು. ಇಲ್ಲಿ ಅವರು ಕಮಲಾ ಮಹಾರಾಣಾ ಅವರನ್ನು ಭೇಟಿಯಾದರು. ಕಮಲಾ ಅವರು ಸ್ವ-ಸಹಾಯ ಗುಂಪಿನ ಭಾಗವಾಗಿದ್ದಾರೆ. ಮತ್ತು ‘ವೇಸ್ಟ್ ಟು ವೆಲ್ತ್’ಜೊತೆಗೆ ಮಹಿಳಾ ಸಬಲೀಕರಣದಲ್ಲಿ ಕೆಲಸ ಮಾಡುತ್ತಾರೆ.
ಕಳೆದ ವರ್ಷ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಅವರನ್ನು ಉಲ್ಲೇಖಿಸಲಾಗಿತ್ತು. ಇತ್ತೀಚೆಗೆ ಕಮಲಾ ಅವರು ಪ್ರಧಾನಿ ಮೋದಿಯವರಿಗೆ ವಸ್ತ್ರದಿಂದ ತಯಾರಿಸಿದ ರಾಖಿಯನ್ನೂ ಕಳುಹಿಸಿದ್ದರು.