ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯದ , ದಾವಣಗೆರೆ, ಧಾರವಾಡ, ಕೋಲಾರ, ಕಲಬುರಗಿ, ಮಂಡ್ಯ, ಹಾಸನ, ಚಿತ್ರದುರ್ಗ ಸೇರಿದಂತೆ 9 ಜಿಲ್ಲೆಯಲ್ಲಿ ಲೋಕಾ ದಾಳಿ ನಡೆಸಿದ್ದು, 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಲೋಕಾಯುಕ್ತ ನೀಡಿದೆ.